ಹೊಸಕೋಟೆಯಲ್ಲಿ ರಾಜಕೀಯ ಸಮಾವೇಶ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ ವಾದಿ) ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಹೊಸಕೋಟೆ  ವಿಧಾನಸಭಾ ಕ್ಷೇತ್ರದಲ್ಲಿ ರಾಕೀಯ ಸಮಾವೇಶವು ಹೊಸಕೋಟೆಯಲ್ಲಿ ನಡೆಯಿತು.

ಸಮಾವೇಶದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಎಸ್.ವರಲಕ್ಷ್ಮಿ ಮಾತನಾಡಿ ʻಚುನಾವಣೆಯಲ್ಲಿ ರೈತರ ಸಮಸ್ಯೆಗಳ, ಕಾರ್ಮಿಕರ ಸಮಸ್ಯೆಗಳು, ವಿದ್ಯಾರ್ಥಿ-ಯುವಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ನಿರುದ್ಯೋಗ, ಹಸಿವು, ಬಡತನದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಾಗಿ ಜಾತಿ, ಧರ್ಮ, ಹಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾನವೀಯತೆ ಎತ್ತಿಯುಡಿಯುವವರನ್ನು ಜನರು ಇಂದು ಆಯ್ಕೆ ಮಾಡಬೇಕಾದ ತುರ್ತು ಇದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮೀನಾಕ್ಷಿ ಸುಂದರಂ, ಕೆ.ಪ್ರಕಾಶ್, ವಿ.ಗೀತಾ, ಚಂದ್ರತೇಜಸ್ವಿ, ಹರೀಂದ್ರ, ಲೀಲಾವತಿ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *