ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ

ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಸಿಪಿಐ(ಎಂ) ಆಗ್ರಹ

ಮಹಾರಾಷ್ಟ್ರ ರಾಜ್ಯ ಸರ್ಕಾರವು – ಮುಂಬೈ ರೈಲು ಸ್ಫೋಟ ಪ್ರಕರಣ (2006) ಮತ್ತು ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ, ಈ ಎರಡು ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದ ನ್ಯಾಯಾಲಯದ ತೀರ್ಪುಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಆರೋಪಿಗಳು ಹೆಚ್ಚಾಗಿ ಮುಸ್ಲಿಮರಾಗಿದ್ದರು. ಸರ್ಕಾರವು ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತು ಮತ್ತು ನ್ಯಾಯಾಲಯದ ಆದೇಶದ ಮೇಲೆ ತಡೆ ತಂದಿತು. ಇದಕ್ಕೆ ವ್ಯತಿರಿಕ್ತವಾಗಿ, ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ, ಆರೋಪಿಗಳು ಹಿಂದುತ್ವ ಉಗ್ರಗಾಮಿ ವ್ಯಕ್ತಿಗಳಾಗಿದ್ದರು, ಸರ್ಕಾರವು ಆರೋಪಿಗಳ ಖುಲಾಸೆಯ ವಿರುದ್ಧ  ಮೇಲ್ಮನವಿ ಸಲ್ಲಿಸಲಿಲ್ಲ. ಇದು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಕೋಮುವಾದಿ ಪಕ್ಷಪಾತವನ್ನು ಸ್ಪಷ್ಟವಾಗಿ ಬಯಲುಗೊಳಿಸುತ್ತದೆ.

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಮತ್ತು ಆರೋಪಿಗಳನ್ನು ಸರಿಯಾದ ವಿಚಾರಣೆಗೆ ಒಳಪಡಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಆಗಸ್ಟ್ 18, 2025 ರಂದು ನಡೆದ ಪೊಲಿಟ್‍ಬ್ಯುರೊ ಸಭೆಯ ನಂತರ  ಈ ಹೇಳಿಕೆ ನೀಡಿದೆ.

Leave a Reply

Your email address will not be published. Required fields are marked *